ಗೀಸರ್ ನಿಂದ ವಿಷಾನಿಲ ಸೋರಿಕೆ ➤ ಯುವಕ – ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜೂ 12.  ಗ್ಯಾಸ್ ಗೀಸರ್ ನಿಂದ ವಿಷಾನಿಲ ಸೋರಿಕೆಯಾಗಿ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನ ಚಿಕ್ಕಜಾಲದಲ್ಲಿ ನಡೆದಿದೆ.

ಮೃತರನ್ನು ಗುಂಡ್ಲುಪೇಟೆಯ ಚಂದ್ರಶೇಖರ್ ಹಾಗೂ ಗೋಕಾಕ್ ನ ಸುಧಾರಾಣಿ ಎಂದು ಗುರುತಿಸಲಾಗಿದೆ.ಇವರಿಬ್ಬರು ಬೆಂಗಳೂರಿನ ನಂದಿಹಿಲ್ಸ್ ಬಳಿಯ ಗಾಲ್ಪ್ ಹೋಟೆಲ್​ನಲ್ಲಿ ಉದ್ಯೋಗದಲ್ಲಿದ್ದರು. ಬೆಂಗಳೂರಿನ ತಬೇರನಹಳ್ಳಿಯಲ್ಲಿ ಜೂನ್ 10 ರಂದು ಈ ಘಟನೆ ನಡೆದಿದ್ದು,ಘಟನೆ ಎರಡು ದಿನ ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳಿಂದ ಮನೆಯಿಂದ ಯಾರೂ ಹೊರಗೆ ಬಾರದಿದ್ದಾಗ ಮನೆಯ ಮಾಲೀಕರು ಅನುಮಾನಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆ ಬಾಗಿಲು ಒಡೆದು ನೋಡಿದಾಗ ಇಬ್ಬರ ಮೃತದೇಹ ಸ್ನಾನದ ಕೋಣೆಯಲ್ಲಿ ಪತ್ತೆಯಾಗಿದೆ.

Also Read  ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ➤ ಪರೀಕ್ಷೆ ಇಲ್ಲದೆ ಪಾಸ್ ಮಾಡುವುದಕ್ಕೆ ಹೈಕೋರ್ಟ್ ತಡೆ

 

 

error: Content is protected !!
Scroll to Top