ಫ್ಯಾಷನ್ ಶೋ ರಾಂಪ್ ವಾಕ್ ವೇಳೆ ಬಿದ್ದ ಕಬ್ಬಿಣದ ಪಿಲ್ಲರ್ ➤ ಯುವ ಮಾಡೆಲ್ ಮೃತ್ಯು

(ನ್ಯೂಸ್ ಕಡಬ) newskadaba.com  ನೋಯ್ಡಾ, ಜೂ. 12. ನೋಯ್ಡಾದ ಖಾಸಗಿ ಸ್ಟುಡಿಯೋವೊಂದರಲ್ಲಿ ಆಯೋಜಿಸಲಾಗಿದ್ದ ಫ್ಯಾಷನ್ ಶೋ ವೇಳೆ ರಾಂಪ್ ವಾಕ್ ಮಾಡುವಾಗ ಕಬ್ಬಿಣದ ಪಿಲ್ಲರ್ ಬಿದ್ದು 24 ವರ್ಷದ ಯುವ ಮಾಡೆಲ್ ಮೃತಪಟ್ಟು, ಮತ್ತೋರ್ವ ಗಾಯಗೊಂಡ ಘಟನೆ ನಡೆದಿದೆ.

ಮೃತರನ್ನು ಗ್ರೇಟರ್ ನೋಯ್ಡಾದ ಗೌರ್ ಸಿಟಿ-2 ಯ ನಿವಾಸಿ ವಂಶಿಕಾ ಚೋಪ್ರಾನಿ ಎಂದು ಗುರುತಿಸಲಾಗಿದೆ. ಗಾಯಗೊಂಡ ಯುವಕನನ್ನು ಬಾಬಿ ರಾಜ್ ಎಂದು ಗುರುತಿಸಲಾಗಿದ್ದು, ನೋಯ್ಡಾದ ಸೆಕ್ಟರ್ 16 ಎ ನಲ್ಲಿರುವ ಫಿಲ್ಮ್ ಸಿಟಿಯ ಲಕ್ಷ್ಮಿ ಸುಡಿಯೋದಲ್ಲಿ ಈ ಅಪಘಾತ ಸಂಭವಿಸಿದೆ. ಈ ಸಂಬಂಧ ಪೊಲೀಸರು ಫ್ಯಾಷನ್ ಶೋ ಆಯೋಜಕ ಮತ್ತು ಲೈಟಿಂಗ್ ಕಾರ್ಯದಲ್ಲಿ ತೊಡಗಿದ್ದ 4 ಜನರನ್ನು ಬಂಧಿಸಿದ್ದಾರೆ ಎಂದು ನೋಯ್ಡಾದ ಹೆಚ್ಚುವರಿ ಡಿಸಿಪಿ ಮೋಹನ್ ಅವಸ್ತಿ ತಿಳಿಸಿದ್ದಾರೆ. ಫ್ಯಾಷನ್ ಶೋಗೆ ಯಾವುದೇ ಅನುಮತಿ ನೀಡಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Also Read  ನೆಲ್ಯಾಡಿ: ಅಕ್ರಮವಾಗಿ ಮದ್ಯ, ಜಿಲೆಟಿನ್ ಕಡ್ಡಿ, ಡೀಸೆಲ್‌ ಮಾರಾಟ ➤ ಆರೋಪಿ ಹೊಟೇಲ್ ಮಾಲಕನ ಬಂಧನ

error: Content is protected !!
Scroll to Top