ಬಸ್ ಢಿಕ್ಕಿ- ರಸ್ತೆ ದಾಟಲು ನಿಂತಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಜೂ 12. ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗವಾಗಿ ಬಂದ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ತ್ರಾಸಿ ರಾ.ಹೆ. 66ರಲ್ಲಿ ಭಾನುವಾರದಂದು ರಾತ್ರಿ ನಡೆದಿದೆ.

ಮೃತರನ್ನು ಸಾಸ್ತಾನ ಮೂಲದ ರಾಜು ಪೋಜಾರಿ ಎಂದು ಗುರುತಿಸಲಾಗಿದೆ. ಇವರು ತ್ರಾಸಿಯ ಪೆಟ್ರೋಲ್ ಬಂಕ್ ಸಮೀಪ ರಾ.ಹೆ.66ರ ರಸ್ತೆಯ ಡಿವೈಡರ್ ಬಳಿ ರಸ್ತೆಯ ಅಂಚಿನಲ್ಲಿ ರಸ್ತೆ ದಾಟಲು ನಿಂತಿದ್ದ ವೇಳೆ ಕುಂದಾಪುರ ಕಡೆಯಿಂದ ಬಂದ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Scroll to Top