(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.20. ಲಾರಿ ಹಾಗೂ ಕಾರು ಮಧ್ಯೆ ಢಿಕ್ಕಿ ಸಂಭವಿಸಿದ ಪರಿಣಾಮ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.
ಇಲ್ಲಿನ ಆಶೀರ್ವಾದ್ ಸಭಾಂಗಣದ ಎದುರುಗಡೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಲಾರಿ ಮತ್ತು ಕಾರು ಮುಖಾಮುಖಿ ಢಿಕ್ಕಿಯಲ್ಲಿ ಕಾರಿನಲ್ಲಿದ್ದ ಮಂಗಳೂರು ಮೂಲದ ಸಣ್ಣ ಮಗು ಸಹಿತ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಜೆಸಿಬಿ ಮೂಲಕ ವಾಹನಗಳನ್ನು ತೆರವುಗೊಳಿಸಲಾಯಿತು. ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.