ವಿಳಾಸ ಕೇಳುವ ನೆಪದಲಿ ಮಹಿಳೆಯ ಸರ ಎಗರಿಸಿದ ಕಳ್ಳರು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಜೂ. 13. ವಿಳಾಸ ಕೇಳುವ ನೆಪದಲ್ಲಿ ಹಾಡಹಗಲೇ ವೃದ್ಧೆಯೋರ್ವರ ಸರ ಎಗರಿಸಿ ಪರಾರಿಯಾದ ಘಟನೆ ನಗರದ ಕೋಟೆ ಬಡಾವಣೆಯ ಸುಗ್ಗಿಕಲ್ ರಸ್ತೆಯಲ್ಲಿ ನಡೆದಿದೆ.


ನಗರದ ಕೋಟೆ ಬಡಾವಣೆಯ ನಿವಾಸಿ ಲೀಲಾವತಿ ಎಂಬವರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಂದರ್ಭ, ಬೈಕಿನಲ್ಲಿ ಬಂದ ಕಳ್ಳರು ಸರ ಎಗರಿಸಿ ಪರಾರಿಯಾಗಿದ್ದಾರೆ. ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಘಟನೆಯ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top