➤ ಜೂಜಾಟ – 13 ಮಂದಿಯ ಬಂಧನ

(ನ್ಯೂಸ್ ಕಡಬ)newskadaba.com  ಮಂಗಳೂರು, ಜೂ. 13. ಅತಿಕಾರಿಬೆಟ್ಟು ಗ್ರಾಮದ ಕಕ್ವೆ ಎಂಬಲ್ಲಿ ಜೂಜಾಟವಾಡುತ್ತಿದ್ದ  13 ಮಂದಿ ಆರೋಪಿಗಳನ್ನು ಮುಲ್ಕಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ನಡೆಯುತ್ತಿದೆ ಎಂಬ ಮಾಹಿತಿಯಂತೆ ಸಂಜೆ ಸುಮಾರು 5-10 ಗಂಟೆಗೆ ಮಂಗಳೂರು ಉತ್ತರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರ ಮಾರ್ಗದರ್ಶನದಂತೆ ಮುಲ್ಕಿ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ವಿಧ್ಯಾಧರ್ ಡಿ ಬಾಯ್ಕರಿಕ ಮತ್ತು ಪಿಎಸ್‌ಐ ವಿನಾಯಕ ತೊರಗಲ್ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದರು. ಆರೋಪಿಗಳು ಜೂಜಾಟಕ್ಕೆ ಉಪಯೋಗಿಸಿದ ನಗದು ಹಣ 1,17,310 ರೂಪಾಯಿ, ಇತರ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.ಈ ಪ್ರಕರಣವನ್ನು ಮುಲ್ಕಿ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ.

Also Read  ರಿಕ್ಷಾ ಚಾಲಕನಿಗೆ ಜಾತಿ ನಿಂದನೆ ➤ ಪ್ರಕರಣ ದಾಖಲು

 

 

 

 

 

error: Content is protected !!
Scroll to Top