ಏರ್ ಪೋರ್ಟ್ ಗೆ ತೆರಳುತ್ತಿದ್ದ ಕಾರು ಅಪಘಾತ ➤ ನಾಲ್ವರು ಹಜ್ ಯಾತ್ರಿಕರು ದುರ್ಮರಣ

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಹಜ್ ಯಾತ್ರೆಗೆಂದು ತೆರಳುತ್ತಿದ್ದ ಕಾರು ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಮುಂಬೈ-ನಾಗ್ಪುರ ಸಮೃದ್ಧಿ ಎಕ್ಸ್‌ಪ್ರೆಸ್‌ ವೇ ಯ ನಾಸಿಕ್ ಸ್ಟ್ರೆಚ್‌ ಎಂಬಲ್ಲಿ ನಡೆದಿದೆ.

ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಸುದ್ದಿ ಸಂಸ್ಥೆಯೊಂದಕ್ಕೆ ಮಾಹಿತಿ ನೀಡಿದ ಪ್ರಕಾರ, ಮುಂಬೈನಿಂದ ಶಿರಡಿಗ ಮಾರ್ಗವಾಗಿ ಪ್ರಯಾಣಿಸುತ್ತಿದ್ದ ಟೊಯೊಟಾ ಕಾರಿನ ಟೈರ್ ಬ್ಲಾಸ್ಟ್ ಆಗಿ, ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹಜ್ ಯಾತ್ರೆಗೆಂದು ವಿಮಾನ ನಿಲ್ಧಾಣಕ್ಕೆ ತೆರಳುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Also Read  ಹೆಜ್ಜೇನು ದಾಳಿ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

error: Content is protected !!
Scroll to Top