ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ➤ ಜನಾರ್ದನ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿಗೆ ಕೋರ್ಟ್ ಅನುಮತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದಲ್ಲ ಮಾಜಿ ಸಚಿವ ಜನಾರ್ದನ ರೆಡ್ಡಿಯವರಿಗೆ ಸೇರಿದ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಕೋರಿದ್ದ ಸಿಬಿಐ ಮನವಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅನುಮತಿ ನೀಡಿದೆ.

ರೆಡ್ಡಿಯವರ ಆಸ್ತಿ ಮಾತ್ರವಲ್ಲದೆ ಅವರ ಪತ್ನಿಗೆ ಸೇರಿದ ಆಸ್ತಿಗಳಲ್ಲಿ ಕೆಲವನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆಯೂ ನ್ಯಾಯಾಲಯ ಆದೇಶಿಸಿದೆ. ಅಕ್ರಮ ಗಣಿಕಾರಿಕೆಯಿಂದ ರಾಜ್ಯದ ಬೊಕ್ಕಸಕ್ಕೆ 198 ಕೋಟಿ ರೂ. ನಷ್ಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಅರ್ಜಿಯನ್ನು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಬಿ.ಜಯಂತ್ ಕುಮಾರ್ ವಿಚಾರಣೆ ನಡೆಸಿ, ಇದೇ 12ರಂದು ಆದೇಶ ಪ್ರಕಟಿಸಿ, ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮಿ ಅರುಣಾ ಹೆಸರಿನಲ್ಲಿರುವ 65.05 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳ ಲಗತ್ತಿಗೆ ಅನುಮತಿ ನೀಡಿದೆ.

Also Read  ಪಾದಚಾರಿಗೆ ಲಾರಿ ಢಿಕ್ಕಿ ➤ ವ್ಯಕ್ತಿ ಸ್ಥಳದಲ್ಲೇ ಮೃತ್ಯು

error: Content is protected !!
Scroll to Top