ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 13. ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.

ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ್ ಕುಮಾರ್ ಭೋಜಪ್ಪ ಚೌಹಾಣ್, ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ ಹಾಗೂ ಗೌರಮ್ಮ ಹನುಮಗೌಡ ಹಂಡೆವಜೀರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ಅತಿ ವೇಗದಲ್ಲಿ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಈ ಕುರಿತು ಕುಷ್ಟಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

error: Content is protected !!
Scroll to Top