(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 13. ಬೆಂಗಳೂರು- ಮೈಸೂರು ಹೆದ್ದಾರಿಯ ಟೋಲ್ ದರ ಶೇ. 22ರಷ್ಟು ಹೆಚ್ಚಿಸಿ ರಾ.ಹೆ. ಪ್ರಾಧಿಕಾರವು ಮತ್ತೊಮ್ಮೆ ಆದೇಶ ಹೊರಡಿಸಿದೆ. ಜೂ. 01ರಿಂದಲೇ ಈ ಶುಲ್ಕ ಅನ್ವಯವಾಗಿದ್ದು, ವಾಹನ ಸವಾರರು ಆಕ್ರೋಶ ಹೊರಹಾಕುತ್ತಿದ್ದಾರೆ.
ಒಂದು ಕಡೆ ಟೋಲ್ ದರ ಹೆಚ್ಚಳವು ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದ್ದರೆ, ಸಂಸದ ಪ್ರತಾಪ್ ಸಿಂಹ ಇದನ್ನು ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ, ಇಡೀ ದೇಶದಲ್ಲಿ ಆರ್ಥಿಕ ವರ್ಷ ಶುರುವಾದಾಗ ಟೋಲ್ ಹೆಚ್ಚಳ ಸಹಜ. ಈ ಹೆದ್ದಾರಿಗೆ ಏಪ್ರಿಲ್ ನಲ್ಲಿ ಟೋಲ್ ಹೆಚ್ಚಾಗಬೇಕಿತ್ತು, ಆದರೆ ಆಗಿರಲಿಲ್ಲ. ಈಗ ಶೇ. 22ರಷ್ಟು ಏರಿಕೆ ಆಗಿದೆ. ಹಾಗೂ ಟೋಲ್ ಸಂಗ್ರಹದ ಆರಂಭದಲ್ಲಿ ಫಾಸ್ಟ್ ಟ್ಯಾಗ್ ಸಮಸ್ಯೆ ಇತ್ತು. ಈಗ ಸಮಸ್ಯೆ ಇಲ್ಲ. ಫಾಸ್ಟ್ ಟ್ಯಾಗ್ ಇರದಿದ್ದರೆ ಡಬಲ್ ಚಾರ್ಜ್ ಕಟ್ಟುವುದು ಕಡ್ಡಾಯವಾಗಿದೆ ಎಂದು ಹೇಳಿದ್ದಾರೆ.