ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ ಆಯತಪ್ಪಿ ನೆಲಕ್ಕೆ ಬಿದ್ದು ಈ ದುರ್ಘಟನೆ ನಡೆದಿದೆ.

 

 

Scroll to Top