ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

(ನ್ಯೂಸ್ ಕಡಬ) newskadaba.com ಕಡಬ, ಜೂ. 13. ಕಡಬದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಮಂಗಳವಾರದಂದು ಭೇಟಿ ನೀಡಿದರು.

ಈ ವೇಳೆ ಆಸ್ಪತ್ರೆಯ ವೈದ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ಜೊತೆ ಆರೋಗ್ಯ ಕೇಂದ್ರದ ಕುರಿತು ಮಾಹಿತಿಯನ್ನು ಪಡೆದುಕೊಂಡರು. ಆಸ್ಪತ್ರೆಯಲ್ಲಿ ಸಾರ್ವಜನಿಕರಿಗೆ ಚಿಕಿತ್ಸೆ ಬೇಕಾದ ಸಿಬ್ಬಂದಿಗಳು, ಚಿಕಿತ್ಸೆಗೆ ಬೇಕಾದ ಸಲಕರಣೆಗಳು ಅತೀ ಶೀಘ್ರವಾಗಿ ಒದಗಿಸಿಕೊಡಲು ಪ್ರಯತ್ನ ನಡೆಸಲಾಗುವುದು. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಚರ್ಚಿಸಿ ತಾಲೂಕಿನ ಉತ್ತಮ ಆರೋಗ್ಯ ಕೇಂದ್ರವಾಗಿ ರೂಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕೃಷ್ಣ ಶೆಟ್ಟಿ ಕಡಬ ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Also Read  ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿ ಜೀಪು ಪಲ್ಟಿ ➤ ಬಾಲಕ ಮೃತ್ಯು, ಹಲವರಿಗೆ ಗಾಯ

error: Content is protected !!
Scroll to Top