ರಾಜ್ಯ ಸರಕಾರದಿಂದ 3 ಕೃಷಿ ಕಾಯ್ದೆ ವಾಪಸ್ ಗೆ ನಿರ್ಧಾರ ➤ ಸಚಿವ ಎನ್.ಚೆಲುವರಾಯಸ್ವಾಮಿ

(ನ್ಯೂಸ್ ಕಡಬ) newskadaba.com ಧಾರವಾಡ, ಜೂ. 13. ಈ ಹಿಂದಿನ ಸರ್ಕಾರ ಜಾರಿಗೆ ತಂದಿದ್ದ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತಂತೆ ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಮಾಡಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಹೇಳಿದ್ದಾರೆ.

ಈ ಕುರಿತು ಮಾಧ್ಯಮದೊಂದಿಗೆ ಮಾತನಾಡಿದ ಅವರು, ಹಿಂದಿನ ಸರ್ಕಾರ ಜಾರಿಗೊಳಿಸಿದ ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂಸುಧಾರಣಾ ಕಾಯ್ದೆ ಸೇರಿದಂತೆ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವ ಕುರಿತು ಸಚಿವ ಸಂಪುಟದಲ್ಲಿ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆ ದುರ್ಬಲವಾಗಿದ್ದು, ಪ್ರಸಕ್ತ ವರ್ಷ ಕಳೆದ ಬಾರಿಗಿಂತ ಶೇ.37 ರಷ್ಟು ಕಡಿಮೆಯಾಗಿದೆ. ಎರಡು ದಿನಗಳಲ್ಲಿ ಮಳೆಯಾಗದಿದ್ದರೆ ಮೋಡ ಬಿತ್ತನೆಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

Also Read  ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ ➤ ನಿಂತಿಕಲ್ಲು ಕೆ.ಎಸ್.ಗೌಡ ಶಾಲೆಯ ಕುಶ್ಮಿತಾ ಶಿರಾಜೆ ತೃತೀಯ

error: Content is protected !!
Scroll to Top