ವಿಟ್ಲ: ರಸ್ತೆಗೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ಭರದಲ್ಲಿ ಪಲ್ಟಿಯಾದ ಆಟೋರಿಕ್ಷಾ ➤ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 13. ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿದ ಆಟೋರಿಕ್ಷಾದಿಂದ ಚಾಲಕ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟ ಘಟನೆ ಪುಣಚದಲ್ಲಿ ನಡೆದಿದೆ.

ಮೃತ ಚಾಲಕನನ್ನು ಜಗನ್ನಾಥ ಪೈಸಾರಿ(57) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮಧ್ಯಾಹ್ನ ಊಟದ ಬಳಿಕ ಪುಣಚದ ರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ವೇಳೆ ಆಟೋರಿಕ್ಷಾ ಮಣಿಲ ಎಂಬಲ್ಲಿಗೆ ತಲುಪುತ್ತಿದ್ದಂತೆಯೇ ರಸ್ತೆಗೆ ಪಲ್ಟಿಯಾಗಿ ಬಿದ್ದ ಪರಿಣಾಮ, ತಲೆಗೆ ಗಂಭೀರ ಗಾಯವಾಗಿತ್ತು. ತಕ್ಷಣವೇ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಜೈನಮುನಿಗೆ ಕರೆಂಟ್ ಶಾಕ್ ಕೊಟ್ಟು ಕೊಲೆ- ಮೃತದೇಹವನ್ನು ತುಂಡರಿಸಿ ಕೊಳವೆ ಬಾವಿಗೆಸೆದ ಹಂತಕರು

error: Content is protected !!
Scroll to Top