ಕಾನೂನು ತರಬೇತಿಗೆ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಕಾನೂನು ತರಬೇತಿ ಪಡೆಯಲಿಚ್ಚಿಸುವ ಅಲ್ಪಸಂಖ್ಯಾತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಬಾರ್ ಕೌನ್ಸಿಲ್‍ನಲ್ಲಿ ನೋಂದಾಯಿತರಾದ ಕಾನೂನು ಪದವೀಧರರಾಗಿರಬೇಕು. ಸರ್ಕಾರಿ ವಕೀಲರು ಅಥವಾ 20 ವರ್ಷ ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸಿರುವ ನ್ಯಾಯವಾದಿಗಳ ಬಳಿ ತರಬೇತಿಗೆ ನಿಯೋಜಿಸಲಾಗುವುದು. ಕುಟುಂಬದ ವಾರ್ಷಿಕ ಆದಾಯವು 3.50 ಲಕ್ಷ ರೂ.ಗಳನ್ನು ಮೀರಿರಬಾರದು. 30 ವರ್ಷದೊಳಗಿನ ವಯೋಮಿತಿಯವರಾಗಿದ್ದು, ಅಂತಿಮ ಕಾನೂನು ಪದವಿಯನ್ನು ಪೂರ್ಣಗೊಳಿಸಿ 3 ವರ್ಷ ಮೀರಿರಬಾರದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ನಗರದ ಪಾಂಡೇಶ್ವರದ ಓಲ್ಡ್ ಕೆಂಟ್ ರಸ್ತೆಯ ಮೌಲಾನಾ ಆಝಾದ್ ಭವನದ 2ನೇ ಮಹಡಿಯಲ್ಲಿರುವ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿಯವರ ಕಚೇರಿಯಿಂದ ಪಡೆದು ದಾಖಲೆ ಪತ್ರದ ಜೊತೆಗೆ ಜೂನ್ 30 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಇಂದು ಕಡಬ ತಾಲೂಕು ಪತ್ರಕರ್ತರ ಸಂಘದಿಂದ ಸವಣೂರಿನಲ್ಲಿ ಪತ್ರಿಕಾ ದಿನಾಚರಣೆ

error: Content is protected !!
Scroll to Top