52 ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 14. ಬಾಕಿ ಉಳಿದಿರುವ 52 ಗ್ರಾಮ ಒನ್ ಕೇಂದ್ರ ತೆರೆಯಲು ಗ್ರಾಮ ಪಂಚಾಯತ್‍ಗಳಲ್ಲಿ ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹತೆಗಳು:
ಪ್ರಾಂಚೈಸಿ ಅರ್ಜಿದಾರರು ಡಿಪ್ಲೋಮಾ, ಐ,ಟಿ,ಐ. ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ಅಥವಾ ತಾಂತ್ರಿಕ ವಿಭಾಗದಲ್ಲಿ ಪರಿಣಿತಿ ಹೊಂದಿರಬೇಕು ಹಾಗೂ ಕಂಪ್ಯೂಟರ್ ಜ್ಞಾನ ಕಡ್ಡಾಯ. ಅರ್ಜಿದಾರರು ಸ್ವಂತ ಅಥವಾ ಬಾಡಿಗೆ ಕಟ್ಟಡ ಹೊಂದಿರಬೇಕು ಅಥವಾ ಟೈಲ್ಸ್, ಗ್ರಾನೈಟ್ ಫ್ಲೋರಿಂಗ್, ಆರ್‍ ಸಿಸಿ ಛಾವಣಿ ಇತ್ಯಾದಿ ಯಾವುದೇ ನೀರು ಸೋರಿಕೆಯಾಗದ ಕಟ್ಟಡಗಳಲ್ಲಿ ಗ್ರಾಮ ಒನ್ ಕೇಂದ್ರವನ್ನು ಸ್ಥಾಪಿಸಲು ತಯಾರಾಗಿರಬೇಕು. ಆಧಾರ್ ಸರ್ಟಿಫಿಕೇಟ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದರೆ ಉತ್ತಮ, ಗ್ರಾಮ ಪಂಚಾಯತ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ, ಮಹಿಳೆಯರಿಗೆ ವಿಕಲಚೇತನರಿಗೆ ಹಾಗೂ ತೃತೀಯ ಲಿಂಗಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ವೆಬ್‍ಸೈಟ್ ವಿಳಾಸ: https://www.karnataka.gov.in/ಮೂಲಕ ಇದೇ ಜೂ.15 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 080-69008800, 49203888 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಾಸರಗೋಡಿನಲ್ಲಿ ಹೆಚ್ಚುತ್ತಿರುವ ಕೊರೋನಾ ಎರಡನೇ ಅಲೆ ➤ ದ.ಕ ಜಿಲ್ಲೆಯ ಹಲವು ಗಡಿ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ➤ ಜಿಲ್ಲೆಗೆ ಪ್ರವೇಶಿಸುವ ವೇಳೆ ನೆಗೆಟಿವ್ ರಿಪೋರ್ಟ್ ಕಡ್ಡಾಯ

error: Content is protected !!
Scroll to Top