ವಾಟ್ಸಾಪ್ ಸ್ಟೇಟಸ್ ವಿಚಾರ- ಜಾತಿ ನಿಂದನೆ, ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 14. ಮಹೇಶ್ ಶೆಟ್ಟಿ ತಿಮರೋಡಿ ಪರ ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಿಬ್ಬರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ.


ಬಂಧಿತ ಆರೋಪಿಗಳನ್ನು ರಂಜಿತ್ ಮದ್ದಡ್ಕ ಹಾಗೂ ಉಮೇಶ್ ಕುಲಾಲ್ ಎಂದು ಗುರುತಿಸಲಾಗಿದೆ. ಇವರನ್ನು ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿದೆ. ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ) ಎಂಬಾತ ನೀಡಿದ ದೂರಿನಂತೆ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್ ಹಾಗೂ ರಂಜಿತ್ ಮತ್ತಿತರರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

Also Read  ಕಡಬ ತಾಲೂಕು ಪಂಚಾಯತ್ ಅಧ್ಯಕ್ಷರಿಂದ ಶಾಲಾ ಭೇಟಿ ➤ ಸಮಸ್ಯೆಗಳ ಬಗ್ಗೆ ಪರಿಶೀಲನೆ

error: Content is protected !!
Scroll to Top