ಶಿವಮೊಗ್ಗ: ಮೆಸ್ಕಾಂ ಕಛೇರಿಗೆ ಕಲ್ಲು ತೂರಾಟ ➤ ಬಿಜೆಪಿ ಶಾಸಕರು ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 14. ವಿದ್ಯುತ್ ದರ ಏರಿಕೆ ವಿರೋಧಿಸಿ ಶಾಸಕ ಎಸ್.ಎನ್‌. ಚನ್ನಬಸಪ್ಪ ನೇತೃತ್ವದಲ್ಲಿ ನಡೆದ ಪ್ರತಿಭಟನೆಯ ವೇಳೆ ಕಿಡಿಗೇಡಿಯೋರ್ವ ಮೆಸ್ಕಾಂ ಕಚೇರಿಗೆ ಕಲ್ಲು ತೂರಿ ಕಿಟಕಿ ಗಾಜು ಒಡೆದು ಹಾಕಿರುವ ಕುರಿತು ವರದಿಯಾಗಿದೆ.

ಬಿಜೆಪಿಯು ವಿದ್ಯುತ್ ದರ ಏರಿಕೆಯ ವಿರುದ್ಧ ಇಲ್ಲಿನ ರೈಲು ನಿಲ್ದಾಣದ ಬಳಿಯ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿತ್ತು. ಈ ವೇಳೆ ಬಿಜೆಪಿ ಮುಖಂಡರ ಭಾಷಣ ಮುಗಿಯುತ್ತಿದ್ದಂತೆಯೇ ಮೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದ ಪ್ರತಿಭಟನಾಕಾರರು ಮೆಸ್ಕಾಂ ಪ್ರವೇಶ ದ್ವಾರಕ್ಕೆ ನುಗ್ಗಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದು, ಈ ಸಂದರ್ಭ ತಳ್ಳಾಟ ನಡೆದು, ಕೆಲವರು ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ್ದಾರೆ. ಪರಿಣಾಮ ಮೆಸ್ಕಾಂ ಕಚೇರಿಯ ಕಿಟಕಿ ಗಾಜು ಪುಡಿಯಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಮುರುಗೇಶ ಎಂಬಾತನಿಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

Also Read  ಕೋರ್ಟ್ ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್...!

error: Content is protected !!
Scroll to Top