ಮಂಗಳೂರು: ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ನಗರದ ಜಿಲ್ಲಾ ಕಾರಾಗೃಹದಲ್ಲಿರುವ ವಿಚಾರಣಾಧೀನ ಕೈದಿಯ ಬಳಿ ಮಾದಕ ವಸ್ತು ಪತ್ತೆಯಾಗಿದ್ದು, ಈ ಕುರಿತು ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಗಾಗಲೇ ಬಂಧಿತನಾಗಿರುವ ಬಂಟ್ವಾಳ ತಾಲೂಕಿನ ಇಬ್ರಾಹೀಂ ಖಲೀಲ್ ಎಂಬ ವಿಚಾರಣಾಧೀನ ಕೈದಿಯನ್ನು ಬುಧವಾರದಂದು ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಿ ಮರಳಿ ಕಾರಾಗೃಹಕ್ಕೆ ಕರೆತಂದಾಗ ಮಾದಕ ವಸ್ತು ‘ಎಂಡಿಎಂಎ’ ಲಭಿಸಿದೆ ಎನ್ನಲಾಗಿದೆ. ಈ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top