ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ➤ ಮತ್ತೋರ್ವ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 15. ಕಳೆದ ನವೆಂಬರ್‌ನಲ್ಲಿ ಸಂಭವಿಸಿದ್ದ ಕುಕ್ಕರ್‌ ಬಾಂಬ್‌ ಪ್ರಕರಣದ ಆರೋಪಿಯೊಂದಿಗೆ ನಂಟು ಹೊಂದಿದ್ದನೆಂಬ ಆರೋಪದಡಿ ಒಡಿಶಾ ಮೂಲದ ಓರ್ವನನ್ನು ಒಡಿಶಾದ ಸ್ಪೆಷಲ್‌ ಟಾಸ್ಕ್ ಫೋರ್ಸ್‌ ಬಂಧಿಸಿರುವ ಕುರಿತು ವರದಿಯಾಗಿದೆ.

ಬಂಧಿತನನ್ನು ಒಡಿಶಾ ಮೂಲದ ಪ್ರೀತಂಕಾರ್‌ (31) ಎಂದು ಗುರುತಿಸಲಾಗಿದೆ. ಈತನ ಬಂಧನದ ಬೆನ್ನಲ್ಲೇ ಕುಕ್ಕರ್ ಬಾಂಬ್ ಪ್ರಕರಣದ ಆರೋಪಿ ಶಾರೀಕ್ ​ಗೆ ಐಸೀಸ್​ ಏಜೆಂಟ್​​ಗಳ ಜೊತೆ ನಂಟು ಹೊಂದಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರೀತಂಕಾರ್‌ ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್‌ ಶಾರೀಕ್‌ಗೆ ಸಿಮ್‌ ಕಾರ್ಡ್‌ ನೀಡಿದ್ದ ಎನ್ನಲಾಗಿದೆ.

Scroll to Top