ನಾಳೆಯಿಂದಲೇ (ಜೂ. 16) ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭ ➤ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರಕಾರ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ನಾಳೆಯಿಂದಲೇ ಆರಂಭಿಸುವುದಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೋಜನೆಯ ಕುರಿತು ಯಾವುದೇ ಗೊಂದಲಗಳಿದ್ದರೆ ಸಹಾಯವಾಣಿ ಸಂಖ್ಯೆ 1902ಕ್ಕೆ ಕರೆ ಮಾಡಬಹುದು. ಅಲ್ಲದೇ ಅರ್ಜಿ ಸಲ್ಲಿಸಲು ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ವರ್ಷ ಪೂರ್ತಿ ನಿರಂತರವಾಗಿರುತ್ತದೆ ಎಂದು ಹೇಳಿದರು. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ನ್ ಕೇಂದ್ರಗಳಲ್ಲಿ ಉಚಿತವಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಎಸ್ಎಂಎಸ್ ಮೂಲಕ ಹಾಗೂ ಸೇವಾಸಿಂಧು ಪೋರ್ಟಲ್ ಮೂಲಕ Auto generated ಸ್ವೀಕೃತಿಗಳನ್ನು ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಅರ್ಜಿದಾರರ ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಮೊಬೈಲ್ ಸಂಖ್ಯೆ ಹಾಗೂ ಅರ್ಜಿದಾರರ ಬ್ಯಾಂಕ್ ಖಾತೆ ವಿವರಗಳು ಅಗತ್ಯವಾಗಿರುತ್ತದೆ ಎಂದು ತಿಳಿಸಿದರು.

Also Read  ಕಲ್ಯಾಣ ಸಂಘಟಿಕರ ಹುದ್ದೆಗೆ ಅರ್ಜಿ ಆಹ್ವಾನ

error: Content is protected !!
Scroll to Top