ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ.

ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

Also Read  ರೀಲ್ಸ್‌ ಗಾಗಿ ಪೆಟ್ರೋಲ್‌ ಬಾಂಬ್‌ ಸ್ಫೋಟ: ವಿದ್ಯಾರ್ಥಿಗಳ ವಿರುದ್ಧ ಕೇಸ್‌

.

 

 

 

 

 

error: Content is protected !!
Scroll to Top