ಶಿವಮೊಗ್ಗ ಮೆಸ್ಕಾಂ ಕಛೇರಿಗೆ ಮುತ್ತಿಗೆಗೆ ಯತ್ನ ➤ ಸಂಸದ ಬಿವೈ.ರಾಘವೇಂದ್ರ ಸೇರಿ ಹಲವರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ. 15. ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿದ್ಯುತ್ ದರ ಹೆಚ್ಚಳವನ್ನು ಖಂಡಿಸಿ ಶಿವಮೊಗ್ಗ ಮೆಸ್ಕಾಂ ಕಛೇರಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ಕಾಂಗ್ರೆಸ್ ಸರಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ಮಾತನಾಡಿದ ಬಿವೈ ರಾಘವೇಂದ್ರ, ಕಾಂಗ್ರೆಸ್ ನವರು ಜನರಿಗೆ ಸುಳ್ಳು ಭರವಸೆ ಕೊಟ್ಟು ಅಧಿಕಾರಕ್ಕೆ ಬಂದಿದ್ದಲ್ಲದೇ ಉಚಿತ ವಿದ್ಯುತ್ ಎಂದು ಘೋಷಣೆ ಮಾಡಿ ಇದೀಗ ವಿದ್ಯುತ್ ದರ ಹೆಚ್ಚಿಸಿದ್ದಾರೆ. ಸರಕಾರ ತಕ್ಷಣ ಈ ಆದೇಶವನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಬಳಿಕ ಕಾರ್ಯಕರ್ತರು ಮೆಸ್ಕಾಂ ಕಛೇರಿಗೆ ಮುತ್ತಿಗೆ ಹಾಕಲು ಮುಂದಾದಾಗ ಪೊಲೀಸರು ತಡೆದಿದ್ದಾರೆ. ಒಳಗೆ ಬಿಡುವಂತೆ ಪಟ್ಟು ಹಿಡಿದಿದ್ದ ಕಾರ್ಯಕರ್ತರು ಪೊಲೀಸರ ಜೊತೆಗೆ ವಾಗ್ವಾದಕ್ಕಿಳಿದಿದ್ದು, ಈ ವೇಳೆ ಸಂಸದ ರಾಘವೇಂದ್ರ, ಮಾಜಿ ಶಾಸಕ ಅಶೋಕ್ ನಾಯ್ಕ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Also Read  ಕ್ಷುಲ್ಲಕ ವಿಚಾರಕ್ಕೆ ಬಾರ್ ಕ್ಯಾಶಿಯರ್ ಗೆ ಡ್ರ್ಯಾಗರ್ ನಿಂದ ಚುಚ್ಚಿ ಹಲ್ಲೆ

error: Content is protected !!
Scroll to Top