ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ರದ್ದು ➤ ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 15. ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಹಿಂದಿನ ಸರ್ಕಾರ ಪರಿಚಯಿಸಿದ್ದ ಮತಾಂತರ ವಿರೋಧಿ ಕಾನೂನನ್ನ ರದ್ದುಗೊಳಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಇನ್ನು ಪಠ್ಯ ಪರಿಷ್ಕರಣೆಯ ಅಂತಿಮ ವರದಿ ಸಿದ್ಧವಾಗಿದ್ದು, ಆರ್‌ಎಸ್‌ಎಸ್ ಸಂಸ್ಥಾಪಕ ಕೆ.ಬಿ.ಹೆಡ್ಗೆವಾರ್ ಮತ್ತು ಇತರರ ಪಾಠಗಳನ್ನ ಶಾಲಾ ಪಠ್ಯ ಪುಸ್ತಕದಿಂದ ತೆಗೆದುಹಾಕಲು ಕ್ಯಾಬಿನೆಟ್ ನಿರ್ಧರಿಸಿದ್ದು, ಜೊತೆಗೆ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವುದನ್ನ ಕಡ್ಡಾಯಗೊಳಿಸಲು ಸರ್ಕಾರ ನಿರ್ಧರಿಸಿದೆ ಎನ್ನಲಾಗಿದೆ.

Also Read  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆಭರಣಗಳು ಲೂಟಿ ➤ ಆಡಳಿತ ಮಂಡಳಿಯ ಮೇಲೆಯೇ ದೂರು ದಾಖಲು

error: Content is protected !!
Scroll to Top