ಮಂಗಳೂರು: ಮಚ್ಚಿನೇಟಿಗೆ ಮತ್ತೊಂದು ಬಲಿ ► ನಿದ್ರಿಸುತ್ತಿದ್ದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು, ಜ.22. ಮನೆಯ ಮೇಲ್ಚಾವಣಿಯಲ್ಲಿ ಮಲಗಿದ್ದ ವ್ಯಕ್ತಿಯನ್ನು ಮೂವರ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದ ಘಟನೆ ಪಣಂಬೂರು ಎಂಬಲ್ಲಿ ಸೋಮವಾರ ಮುಂಜಾನೆ ನಡೆದಿದೆ.

ಮೃತರನ್ನು ರೌಡಿ ಶೀಟರ್ ಭರತೇಶ್ ಸಹೋದರ ಶಿವರಾಜ್(45) ಎಂದು ಗುರುತಿಸಲಾಗಿದೆ. ಮನೆಯ ಟೆರೇಸ್ ಮೇಲೆ ಮಲಗಿದ್ದ ಶಿವರಾಜ್ ರನ್ನು ಬೆಳಗ್ಗಿನ ಜಾವ ಮೂವರ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಪರಾರಿಯಾಗಿದ್ದು, ಗಂಭೀರ ಗಾಯಗೊಂಡ ಶಿವರಾಜ್ ರನ್ನು ಕೂಡಲೇ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪಣಂಬೂರು ಠಾಣಾ ಪೊಲೀಸರು ಆಗಮಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Also Read  ಕಡಬ ಸರಸ್ವತಿ ವಿದ್ಯಾಲಯ: ಪ್ರೌಢಶಾಲೆಯಲ್ಲಿ ಗುರುಪೂರ್ಣಿಮೆ ಆಚರಣೆ

error: Content is protected !!
Scroll to Top