ಕಡಬ: ಸರಸ್ವತೀ ವಿದ್ಯಾಲಯದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ

(ನ್ಯೂಸ್ ಕಡಬ) newskadaba.com ಕಡಬ, ಜೂ. 16. ದ್ವಾರಕ ಪ್ರತಿಷ್ಠಾನ ಪುತ್ತೂರು ಇದರ ವತಿಯಿಂದ ಜೂನ್ 13 ಮಂಗಳವಾರದಂದು ಸರಸ್ವತಿ ವಿದ್ಯಾಲಯ ಪ್ರೌಢಶಾಲೆ ಸಭಾಂಗಣದಲ್ಲಿ “ಓದೋಣ ಬಾರ” ಶೀರ್ಷಿಕೆಯಲ್ಲಿ ಪುಸ್ತಕ ಹಸ್ತಾಂತರ ಹಾಗೂ ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಬೆಳೆಸುವುದು ಎಂಬ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ  ಸಭಾಧ್ಯಕ್ಷತೆಯನ್ನು ಸರಸ್ವwà ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ ಶ್ರೀ ವೆಂಕಟ್ರಮಣರಾವ್ ಮಂಕುಡೆ ವಹಿಸಿ ಮಕ್ಕಳು ಹೆಚ್ಚು ಹೆಚ್ಚು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಇಟ್ಟುಕೊಳ್ಳಬೇಕು. ಆ ಮೂಲಕ ಜ್ಞಾನವನ್ನು ಹೆಚ್ಚು ಸಂಪಾದಿಸಿಕೊಳ್ಳಬೇಕು ಎಂದು ಅಧ್ಯಕ್ಷೀಯ ನುಡಿಗಳನ್ನು ಆಡಿದರು. ಶ್ರೀ ರಾಮಕುಂಜೇಶ್ವರ ಪದವಿ ಕಾಲೇಜು ರಾಮಕುಂಜ ಇದರ ಪ್ರಾಂಶುಪಾಲರಾದ ಗಣರಾಜ್ ಕುಂಬ್ಳೆ ಇವರು ವಿದ್ಯಾರ್ಥಿಗಳಲ್ಲಿ ಸಾಹಿತ್ಯ ಆಸಕ್ತಿಯನ್ನು ಬೆಳೆಸುವ ವಿಷಯದ ಕುರಿತು ಮಾತನಾಡಿದರು. ದ್ವಾರಕಾ ಪ್ರತಿಷ್ಠಾನ ಪುತ್ತೂರು ಇದರ ಸದಸ್ಯರಾಗಿರುವ ಶ್ರೀಯುತ ವೆಂಕಟಕೃಷ್ಣ ಶರ್ಮಾ ಇವರು ಗ್ರಂಥಾಲಯಕ್ಕೆ ಪುಸ್ತಕ ಹಾಗೂ ಗೋಡೆ ಗಡಿಯಾರವನ್ನು ಹಸ್ತಾಂತರಿಸಿದರು. ವೇದಿಕೆಯಲ್ಲಿ ಪ್ರೌಢವಿಭಾಗದ ಮುಖ್ಯ ಗುರುಗಳಾದ ಶ್ರೀಮತಿ ಶೈಲಶ್ರೀ ರೈ ಎಸ್. ಹಾಗೂ ಸರಸ್ವತೀ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಶಿಕ್ಷಕಿ  ಶ್ರೀಮತಿ  ಭವ್ಯಶ್ರೀ.ಕೆ  ಉಪಸ್ಥಿತರಿದ್ದರು. ಶಿಕ್ಷಕಿ ಶ್ರೀಮತಿ ಸೌಮ್ಯ.ಕೆ.ಎ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ಜಲಜಾಕ್ಷಿ.ಬಿ.ವಿ. ವಂದಿಸಿದರು.

Also Read  ದ. ಕನ್ನಡದ ಮೊದಲ ಆಕ್ಸಿಜನ್ ಉತ್ಪಾದನಾ ಘಟಕ ಬಂಟ್ವಾಳದಲ್ಲಿ ಉದ್ಘಾಟನೆ

 

error: Content is protected !!
Scroll to Top