ಇಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 16. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಮಂಕಾಳ ಎಸ್. ವೈದ್ಯ ಅವರು ಇಂದು (ಜೂ.16) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.


ಪ್ರವಾಸದ ವಿವರ:
ಜೂ.16ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ನಗರದ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಇಲಾಖೆಯ ಪರಿಶೀಲನೆ ಮಾಡುವರು. ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಜಿಲ್ಲೆಯ ಮೀನುಗಾರರು ಹಾಗೂ ಸಾರ್ವಜನಿಕರಿಗೆ ಕಡಲ್ಕೊರೆತದಿಂದ ಉಂಟಾಗಲಿರುವ ಸಮಸ್ಯೆಗಳ ಕುರಿತು ಪೂರ್ವಭಾವಿ ಸಭೆ ನಡೆಸುವರು. 11.30ಕ್ಕೆ ನಗರದ ಮೀನುಗಾರಿಕಾ ಅಭಿವೃದ್ಧಿ ನಿಗಮಕ್ಕೆ ಭೇಟಿ ನೀಡಿ, ಮಧ್ಯಾಹ್ನ 12 ಗಂಟೆಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡುವರು. ನಂತರ ಮಧ್ಯಾಹ್ನ 1 ಗಂಟೆಗೆ ಉಡುಪಿಗೆ ತೆರಳುವರು ಎಂದು ಸಚಿವರ ವಿಶೇಷಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಕಂಬಳದ ಓಟಗಾರ ಶ್ರೀನಿವಾಸ್ ಗೌಡ ಸಹಿತ ಮೂವರ ವಿರುದ್ದ ಕ್ರಿಮಿನಲ್ ದೂರು ದಾಖಲು

error: Content is protected !!
Scroll to Top