ಕಡಲ್ಕೊತೆರ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ, ಪರಿಶೀಲನೆ

(ನ್ಯೂಸ್ ಕಡಬ)newskadaba.com ಕಾಪು, ಜೂ . 16 . ಕಾಪು ವಿಧಾನಸಭಾ ಕ್ಷೇತ್ರದ ಪುರಸಭಾ ವ್ಯಾಪ್ತಿಯ ಮೂಳೂರು, ಪೊಲಿಪು, ಕೈಪುಂಜಾಲು ಭಾಗದಲ್ಲಿ ಕಡಲ್ಕೊರೆತ ಉಂಟಾಗಿದ್ದು, ಈ ಪ್ರದೇಶಗಳಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಇಲಾಖಾಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಳೆಗಾಲದಲ್ಲಿ ಕಡಲ್ಕೊರೆತ ಸಮಸ್ಯೆ ಅಧಿಕವಾಗಲಿರುವುದರಿಂದ ಇದಕ್ಕೆ ಬೇಕಾದ ಪೂರ್ವ ಸಿದ್ಧತ ಕ್ರಮ  ಕೈಗೊಳ್ಳುವಂತೆ ಸಂಬಂಧಿಸಿ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಪುರಸಭಾ ಸದಸ್ಯರಾದ ಸತೀಶ್ಚಂದ್ರ, ರಾಧಿಕಾ, ಕಿರಣ್ ಆಳ್ವ, ಅನಿಲ್ ಕುಮಾರ್, ಅರುಣ್ ಶೆಟ್ಟಿ ಹಾಗೂ ಬಂದರು ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್, ಸಹಾಯಕ ಅಭಿಯಂತರರಾದ ಜಯರಾಜ್, ಪುರಸಭೆಯ ಮುಖ್ಯ ಅಧಿಕಾರಿಗಳಾದ ಸಂತೋಷ್, ಸುಧೀರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

Also Read  ದಂತ ಚಿಕಿತ್ಸೆಯಲ್ಲಿ ಲೇಸರ್ ► ಡಾ| ಮುರಲೀ ಮೋಹನ್ ಚೂಂತಾರು ರವರ ಲೇಖನ

 

 

error: Content is protected !!
Scroll to Top