ಡಿಕೆಶಿ ವಿರುದ್ದ ದಾಖಲಾಗಿದ್ದ 5 ಪ್ರಕರಣಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಈಗಾಗಲೇ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ, ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿ ರಿಲೀಫ್ ನೀಡಿತ್ತು. ಇದೀಗ ಅವರ ವಿರುದ್ಧ ದಾಖಲಾಗಿದ್ದ ಐದೂ ಪ್ರಕರಣಗಳನ್ನು ರದ್ದುಗೊಳಿಸುವ ಮೂಲಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಕೋವಿಡ್-19 ಸಂದರ್ಭ, ಸರ್ಕಾರದ ಮಾರ್ಗಸೂಚಿ ನಿಯಮಗಳನ್ನು ಉಲ್ಲಂಘನೆ ಮಾಡಿ ಕಾಂಗ್ರೆಸ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮೇಕೆದಾಟು ಪಾದಯಾತ್ರೆಯನ್ನು ನಡೆಸಲಾಗಿತ್ತು. ಈ ಹಿನ್ನಲೆ ಅವರ ವಿರುದ್ಧ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿ ಆದೇಶಿಸಿದೆ. ಅಲ್ಲದೇ ಕಾನೂನುಭಂಗದ ಆರೋಪದಲ್ಲಿ ಡಿಕೆಶಿ ವಿರುದ್ಧ ಶಿವಾಜಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೂ ಹೈಕೋರ್ಟ್ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ನ್ಯಾಯಪೀಠವು ಮಧ್ಯಂತರ ತಡೆಯಾಜ್ಞೆಯನ್ನು ನೀಡಿದೆ.

Also Read  ಬಜ್ಪೆ: ಅಪ್ರಾಪ್ತೆಗೆ ಥಳಿಸಿದ ಮಹಿಳಾ ಪೇದೆ ವಿರುದ್ದ ದೂರು

error: Content is protected !!
Scroll to Top