ಜೂನ್ 20ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16 . ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಭರ್ಜರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಜೂನ್ 20ರವರೆಗೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ತುಮಕೂರು, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಜಿಲ್ಲೆಗಳಲ್ಲಿ ಸಹ ಭರ್ಜರಿ ಮಳೆ ಸುರಿಯಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಅಷ್ಟೇ ಅಲ್ಲದೇ, ಕಲಬುರಗಿ, ಬೀದರ್, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಹ ಮಳೆಯ ವಾತಾವರಣ ಇರಲಿದೆ. ಭಾರೀ ಸಂಚಲನವನ್ನುಂಟು ಮಾಡಿದ್ದ ಬಿಪರ್‌ಜೋಯ್‌ ಚಂಡಮಾರುತ ಸದ್ಯ ತನ್ನ ಉಗ್ರರೂಪವನ್ನು ನಿಧಾನವಾಗಿ ಕಡಿಮೆ ಮಾಡುತ್ತಿದೆ. ಗುಜರಾತ್‌ನಲ್ಲಿ ಅಲ್ಲೋಲ ಕಲ್ಲೋಲ ಉಂಟು ಮಾಡಿದ್ದ ಚಂಡಮಾರುತ ಸದ್ಯ ಪಾಕಿಸ್ತಾನದತ್ತ ಸಾಗುತ್ತಿದ್ದು, ನಂತರ ಪುನಃ ಭಾರತದತ್ತ ವ್ಯಾಪಿಸುವ ಸಾಧ್ಯತೆ ಇದೆ.

Also Read  ಕುವೈಟ್ ಏರ್ ಪೋರ್ಟ್ ನಲ್ಲಿ ಕಾಣೆಯಾಗಿದ್ದ ಉಡುಪಿಯ ಮಹಿಳೆ ಪೊಲೀಸ್ ವಶಕ್ಕೆ

 

error: Content is protected !!
Scroll to Top