ಬೆಳ್ಳಾರೆ: ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜೂ. 16. ಬಿಜೆಪಿ ಪಕ್ಷವು ಜಗತ್ತಿನ ಅತೀ ದೊಡ್ಡ ಪಕ್ಷವಾಗಿ ಬೆಳೆಯಲು ಹಿರಿಯರ ಬಲಿದಾನ ಮತ್ತು ಅರ್ಪಣಾ ಮನೋಭಾವವೇ ಕಾರಣ ಎಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಪೆರುವಾಜೆಯ ಜೆ.ಡಿ ಆಡಿಟೋರಿಯಂನಲ್ಲಿ ಜೂ. 16ರಂದು ನಡೆದ ಬಿಜೆಪಿ ಸುಳ್ಯ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಳಿಕ ಮಾತನಾಡಿದ ಅವರು ಶಾಸಕಿ ಸ್ಥಾನಕ್ಕೆ ಆಭ್ಯರ್ಥಿಯಾಗಿ ನನನ್ನು ಪಕ್ಷ ಆಯ್ಕೆ ಮಾಡಿ, ಕಾರ್ಯಕರ್ತರ ಪರಿಶ್ರಮದಿಂದ ಶಾಸಕಿಯಾಗಿ ಆಯ್ಕೆಯಾಗಿದ್ದೇನೆ. ಇದಕ್ಕಾಗಿ ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ಎಲ್ಲರ ಸಹಕಾರ ಬೇಕು ಎಂದು ಹೇಳಿದರು. ಸಭೆಯ ಅಧ್ಯಕ್ಷತೆಯನ್ನು ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ವಹಿಸಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಜಿಲ್ಲಾ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ವೆಂಕಟ್ ವಳಲಂಬೆ, ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಟದ ಸಂಚಾಲಕ ಕೃಷ್ಣ ಶೆಟ್ಟಿ ಕಡಬ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಮಂಡಲ ಪ್ರಧಾನ ಕಾರ್ಯದರ್ಶಿ ಸುಭೋದ್ ಶೆಟ್ಟಿ ಮೇನಾಲ ಸ್ವಾಗತಿಸಿ, ಮಂಡಲ ಉಪಾಧ್ಯಕ್ಷೆ ಇಂದಿರಾ ಬಿ.ಕೆ ವಂದಿಸಿದರು, ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು.

Also Read  ಗೃಹರಕ್ಷಕ ಕ್ಷೇಮಾಭಿವೃದ್ಧಿ ನಿಧಿಯಿಂದ ಸಹಾಯ ಧನ

error: Content is protected !!
Scroll to Top