(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 16. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಹಾಗೂ ಕ್ರೀಡಾ ಸಚಿವ ಬಿ. ನಾಗೇಂದ್ರ ಸಹಿತ 10 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶ ನೀಡಿದೆ.
ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಲಕ್ಷ್ಮೀ ಅರುಣಾ ಅವರ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣವೊಂದರಲ್ಲಿ ಸಿಬಿಐ ವಿಶೇಷ ನ್ಯಾಯಾಲಯವು ಇವರ ಕೆಲವು ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ ಇದೀಗ ಮತ್ತೊಂದು ಶಾಕ್ ನೀಡಿದೆ. ಅಕ್ರಮ ಗಣಿಗಾರಿಕೆಯಿಂದ ರಾಜ್ಯಕ್ಕೆ ಸುಮಾರು 2.82 ಕೋಟಿ ರೂ. ಭಾರಿ ನಷ್ಟ ಉಂಟು ಮಾಡಿದ ಪ್ರಕರಣದ ಸಂಬಂಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಗಾಲಿ ಜನಾರ್ದನ ರೆಡ್ಡಿ, ಕ್ರೀಡಾ ಸಚಿವ ಬಿ. ನಾಗೇಂದ್ರ ಸೇರಿದಂತೆ 10 ಮಂದಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.