(ನ್ಯೂಸ್ ಕಡಬ) newskadaba.com ಗಂಗಾವತಿ, ಜೂ. 16. ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.
ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲೆಂದು ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಶಾಮೀದಾಬೀ(48) ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ.