ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜೂ . 17 . ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11 ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆಗೆ ದಾಖಲಾಗಿರುವ ಮೃತರೆಲ್ಲರೂ ನಾನಾ ಕಾಯಿಲೆಗಳಿಂದ ಬಳಲುತ್ತಿದ್ದು ಇದರೊಂದಿಗೆ ವಯಸ್ಸಾದವರಿಗೆ ಬಿಸಿಲಿನ ತಾಪವನ್ನು ಸಹಿಸಲು ಸಾಧ್ಯವಾಗುತ್ತಿಲ್ಲ, ರೋಗಿಗಳು ಮತ್ತು ಆಸ್ಪತ್ರೆಯ ಸಿಬ್ಬಂದಿಗೆ ವಿಶ್ರಾಂತಿಗಾಗಿ ಮತ್ತು ಬಿಸಿಲಿನ ಶಾಖದ ಅಪಾಯವನ್ನು ತಡೆಗಟ್ಟಲು ಆಸ್ಪತ್ರೆಯಲ್ಲಿ ಫ್ಯಾನ್, ಕೂಲರ್ ಮತ್ತು ಹವಾನಿಯಂತ್ರಣಗಳನ್ನು ವ್ಯವಸ್ಥೆ ಮಾಡಲಾಗಿದೆ. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಅರೆವೈದ್ಯಕೀಯ ಸಿಬ್ಬಂದಿಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದೆ ಎಂದು ಅವರು ಹೇಳಿದರು.

Also Read  ಉಡುಪಿ: ಹಿರಿಯ ಯಕ್ಷಗಾನ ಕಲಾವಿದ ವಾಸುದೇವ ಸಾಮಗ ನಿಧನ

 

 

 

 

error: Content is protected !!
Scroll to Top