ದ.ಕ ಜಿಲ್ಲೆಯ ವಿವಿಧ ವೈದ್ಯಕೀಯ ಕಾಲೇಜುಗಳ ಸಹಯೋಗ ➤ ಇಂದಿನಿಂದ ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜುಗಳ ಸಹಯೋಗದೊಂದಿಗೆ ಇದೇ ಜೂ.17ರಿಂದ 21ರವರೆಗೆ ಹಮ್ಮಿಕೊಳ್ಳಲಾಗಿದೆ.

ಜೂ.17ರಂದು ಪುತ್ತೂರು ತಾಲೂಕಿನ ಪಾಣಾಜೆ ಹಾಗೂ ಜೂ.20ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ, ಉಪ್ಪಿನಂಗಡಿ ಮತ್ತು ಸುಳ್ಯ ತಾಲೂಕಿನ ಬೆಳ್ಳಾರೆ ಹಾಗೂ ಜೂ.21ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ ಆರೋಗ್ಯ ಕೇಂದ್ರಗಳಲ್ಲಿ ವಿಶೇಷ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿದೆ. ಎಂಡೋಸಲ್ಫಾನ್ ಸಂತ್ರಸ್ತರು ಸದುಪಯೋಗ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಮುನಿರತ್ನರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ದ.ಕ ಜಿಲ್ಲಾ ಕಾಂಗ್ರೆಸ್ ಘಟಕ ಆಗ್ರಹ

error: Content is protected !!
Scroll to Top