(ನ್ಯೂಸ್ ಕಡಬ) newskadaba.com ಮಂಗಳೂರು, ಜೂ . 17. ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿ, ಕಮಿಷನ್ ನೀಡುವುದಾಗಿ ನಂಬಿಸಿ ವಂಚಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಜೂ.7 ರಂದು ದೂರುದಾರರಿಗೆ ಅಪರಿಚಿತ ವ್ಯಕ್ತಿ ವಾಟ್ಸಪ್ ನಲ್ಲಿ ಸಂದೇಶ ಮತ್ತು ಟೆಲಿಗ್ರಾಂ ಮೂಲಕ ಲಿಂಕ್ ಕಳುಹಿಸಿದ್ದು ಈ ಮೂಲಕ ಟಾಸ್ಕ್ ಪೂರೈಸಿದರೆ ಕಮಿಷನ್ ನೀಡುವುದಾಗಿ ಹೇಳಿ ಇದನ್ನು ನಂಬಿದ ದೂರುದಾರರು ಹಂತಹಂತವಾಗಿ ಒಟ್ಟು 2.59 ಲ.ರೂ ಗಳನ್ನು ವರ್ಗಾಯಿಸಿದ್ದಾರೆ,ಆದರೆ ಅವರಿಗೆ ಹಣ ನೀಡದೆ ವಂಚನೆ ಮಾಡಲಾಗಿದೆ ಎಂದು ನಗರದ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.