ಜೂ. 23ರಂದು ಕೆ.ಡಿ.ಪಿ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.17. 2023-24ನೇ ಸಾಲಿನ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ಇದೇ ಜೂ.23ರ ಶುಕ್ರವಾರದಂದು ಬೆಳಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Scroll to Top