ಮಳೆ ಕೊರತೆ ಹಿನ್ನೆಲೆ ➤ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ

(ನ್ಯೂಸ್ ಕಡಬ)newskdaba.com ಬೆಂಗಳೂರು, ಜೂ .17. ತಮಿಳುನಾಡು ಸೇರಿ ಕಾವೇರಿ ನದಿ ಪಾತ್ರದ ರಾಜ್ಯಗಳಿಗೆ ಜೂನ್‌ನಲ್ಲಿ 9.19      ಟಿಎಂಸಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕರ್ನಾಟಕಕ್ಕೆ ಆದೇಶಿಸಿದೆ.

ಮಳೆ ಕೊರತೆ ಹಿನ್ನೆಲೆ ಅಷ್ಟು ಪ್ರಮಾಣದ ನೀರು ಬಿಡುಗಡೆ ಸಾಧ್ಯವಿಲ್ಲ ಎಂದು ರಾಜ್ಯ ಸರ್ಕಾರ ಹೇಳಿದೆ.ಶುಕ್ರವಾರ ವಿಡಿಯೋ ಸಂವಾದದ ಮೂಲಕ ನಡೆದ ಸಿಡಬ್ಲ್ಯುಎಂಎ ಸಭೆಯಲ್ಲಿ ಪ್ರಾಧಿಕಾರದ ಪ್ರತಿನಿಧಿಗಳು ಹಾಗೂ ಕರ್ನಾಟಕ, ತಮಿಳುನಾಡು, ಪುದುಚೆರಿ, ಕೇರಳ ಪ್ರತಿನಿಧಿಗಳು ಭಾಗವಹಿಸಿದ್ದರು. ಪ್ರಾಧಿಕಾರ ನಿರ್ದೇಶನ ಪ್ರಕಾರ ಜೂನ್‌ ತಿಂಗಳಲ್ಲಿ ಬಿಳಿಗುಂಡ್ಲು ಮೂಲಕ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡಬೇಕು.ರಾಜ್ಯದ ಪರವಾಗಿ ಜಲಸಂಪನ್ಮೂಲ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್‌ ಸಿಂಗ್‌ ಹಾಗೂ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು, ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ. ಶೇ.68 ರಷ್ಟು ಮಳೆ ಕೊರತೆಯಾಗಿರುವುದರಿಂದ ರಾಜ್ಯದಲ್ಲಿ ಕುಡಿಯುವ ನೀರಿನ ಬಳಕೆಗೂ ನೀರು ಇಲ್ಲದಂತಾಗುವ ಪರಿಸ್ಥಿತಿ ಎದುರಾಗಿದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ.

 

 

 

error: Content is protected !!

Join the Group

Join WhatsApp Group