ಬೆಳ್ತಂಗಡಿ: ಮಹಿಳೆಯ ಕೊಲೆ ಪ್ರಕರಣ ➤ ಆರೋಪಿಗೆ ಜೂ. 19ರಂದು ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 17. ಇಲ್ಲಿನ ನೆರಿಯಕಾಡು ಎಂಬಲ್ಲಿ ಮಹಿಳೆಯೋರ್ವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.19ರಂದು ಆರೋಪಿಗೆ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ ಎಂದು ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತಿಳಿಸಿದೆ.

ಧರ್ಮಸ್ಥಳ ಸಮೀಪದ ನೆರಿಯ ಗ್ರಾಮದ ನೆರಿಯ ಕಾಡು ಕೊಟ್ಟಕ್ಕರ ನಿವಾಸಿ, ತೋಟದ ಕೆಲಸಗಾರ ಜಾನ್ಸನ್ ಕೆ.ಎಂ. ಎಂಬಾತ 2021ರ ಜನವರಿ 21ರಂದು ಸೌಮ್ಯಾ ಫ್ರಾನ್ಸಿಸ್ ಎಂಬಾಕೆಯನ್ನು ಕ್ಷುಲ್ಲಕ ಕಾರಣಕ್ಕೆ ಜಗಳವಾಡಿ ದೊಣ್ಣೆಯಿಂದ ಹಲ್ಲೆಗೈದಿದ್ದ. ಗಂಭೀರ ಗಾಯಗೊಂಡು ಅಸ್ವಸ್ಥಳಾಗಿದ್ದ ಆಕೆಯನ್ನು ಕಕ್ಕಿಂಜೆಯ ಆಸ್ಪತ್ರೆಗೆ ಕೊಂಡೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಆಸ್ಪತ್ರೆಗೆ ಕರೆದೊಯ್ದಾಗ ಸೌಮ್ಯಾ ಫ್ರಾನ್ಸಿಸ್ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದರು. ಈ ಬಗ್ಗೆ ಸೌಮ್ಯಾಳ ಸಹೋದರ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ಈ ತನಿಖೆ ನಡೆಸಿದ್ದ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಸಂದೇಶ್ ಪಿ.ಜಿ. ಅವರು ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಇದು ಕೊಲೆಯಲ್ಲ, ಆದರೆ ನರಹತ್ಯೆ ಎಂದು ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನ ಸ್ವಾಮಿ ತೀರ್ಮಾನಿಸಿ ಶಿಕ್ಷೆಯ ಪ್ರಮಾಣ ಶುಕ್ರವಾರ ಪ್ರಕಟಿಸುವುದಾಗಿ ತಿಳಿಸಿದ್ದರು. ಆದರೆ ಇದೀಗ ಅದನ್ನು ಸೋಮವಾರಕ್ಕೆ ಮುಂದೂಡಲಾಗಿದೆ.

Also Read  ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ - ಮೂವರು ಆರೋಪಿಗಳ ಜಾಮೀನು ಅರ್ಜಿ ವಜಾ

error: Content is protected !!
Scroll to Top