ಮಾದಕ ದ್ರವ್ಯ ಮಾರಾಟಕ್ಕೆ ಯತ್ನ ➤ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ನಿಷೇಧಿತ ಮಾದಕ ದ್ರವ್ಯ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಮಣಿಪಾಲ ಪೊಲೀಸರು ಹೆರ್ಗಾ ಗ್ರಾಮದ ಈಶ್ವರ ನಗರದ ವಸತಿ ಸಮುಚ್ಛಯೊಂದರ ಬಳಿ ಬಂಧಿಸಿದ ಘಟನೆ ನಡೆದಿದೆ.

ಬಂಧಿತರನ್ನು ಕುಂಜಿಬೆಟ್ಟು ಕಾನೂನು ಕಾಲೇಜಿನ ವಿದ್ಯಾರ್ಥಿಗಳಾದ ಕೇರಳ ಮೂಲದ ನಿಭೀಷ್ (23) ಹಾಗೂ ಅಮಲ್ (22) ಎಂದು ಗುರುತಿಸಲಾಗಿದೆ. ಇನ್ನೋರ್ವ ಆರೋಪಿ ಅಪ್ಸಿನ್ ಎಂಬಾತ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ. ಬಂಧಿತರಿಂದ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂ ಪೆಟಮೆನ್ ಮಾದಕ ದ್ರವ್ಯ, 1.25 ಲಕ್ಷ ರೂ. ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. ಉಡುಪಿ ಜಿಲ್ಲಾ ಎಸ್ಪಿ ಅಕ್ಷಯ್ ಮಚ್ಚೀಂದ್ರ ಹಾಕೆ ಮಾರ್ಗದರ್ಶನದಲ್ಲಿ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Also Read  ಮಂಗಳೂರು ವಿ.ವಿ 38ನೇ ವಾರ್ಷಿಕ ಘಟಿಕೋತ್ಸವ

error: Content is protected !!
Scroll to Top