ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕ್ರೀಡಾ  ವಿದ್ಯಾರ್ಥಿ  ವೇತನ  ಯೋಜನೆಯಡಿ  ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ/ ಪ್ರೌಢಶಾಲೆಯಲ್ಲಿ (6 ರಿಂದ 10ನೇ ತರಗತಿ)  ಓದುತ್ತಿರುವ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ  10,000 ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಾಲತಾಣ: https://sevasindhuservices.karnataka.gov.in ಮೂಲಕ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು.

ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022ರ ಏಪ್ರಿಲ್ 1ರಿಂದ 2023ರ ಮಾರ್ಚ್ 31ರ ವರೆಗೆ ನಡೆಸಿದ ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿರಬೇಕು ಅಥವಾ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿರಬೇಕು. ರಾಷ್ಟ್ರೀಯ ಖೇಲೋ ಇಂಡಿಯಾ ಕ್ರೀಡಾಕೂಟದಲ್ಲಿ ಅಥವಾ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ ಭಾಗವಹಿಸಿದಲ್ಲಿ ಅಂತಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

error: Content is protected !!
Scroll to Top