ನೆಲ್ಯಾಡಿ: ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಕಾರು ➤ ಆರು ಮಂದಿ ಗಂಭೀರ



(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ.17. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಿರು ಸೇತುವೆಯಿಂದ ಕೆಳಕ್ಕೆ ಬಿದ್ದ ಪರಿಣಾಮ ಕಾರಿನಲ್ಲಿದ್ದ ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಶನಿವಾರದಂದು ನಡೆದಿದೆ.







ಗಾಯಾಳುಗಳನ್ನು ಬೆಂಗಳೂರು ಆರ್.ಟಿ. ನಗರ ನಿವಾಸಿಗಳೆಂದು ಗುರುತಿಸಲಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗುವೊಂದು ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.






error: Content is protected !!
Scroll to Top