ಉಳ್ಳಾಲ: ಯು.ಟಿ ಖಾದರ್ ಗೆ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

 (ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ರವರಿಗೆ ಅಭಿನಂದಿಸಿ ಅಭಿಮಾನಿಗಳು ಹಾಕಿದ್ದ ಫ್ಲೆಕ್ಸ್ ಗಳನ್ನ ಯಾರೋ ಕಿಡಿಗೇಡಿಗಳು ನಿನ್ನೆ ರಾತ್ರಿ ಹರಿದು ಹಾಕಿದ ಕುರಿತು ವರದಿಯಾಗಿದೆ.

ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಸ್ತೆಯ ವಿಭಜಕ ಮತ್ತು ಇಕ್ಕೆಲಗಳಲ್ಲಿ ಯು.ಟಿ ಖಾದರ್ ಅವರಿಗೆ ಅಭಿನಂದಿಸಿ ಫ್ಲೆಕ್ಸ್ ಗಳನ್ನ ಹಾಕಲಾಗಿತ್ತು. ನಿನ್ನೆ ರಾತ್ರಿ ಯಾರೋ ದುಷ್ಕರ್ಮಿಗಳು ಫ್ಲೆಕ್ಸ್ ಗಳನ್ನ ಹರಿದು ಹಾಕಿದ್ದಾರೆ. ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದು ತಡರಾತ್ರಿ ದ್ವಿಚಕ್ರ ವಾಹನದಲ್ಲಿ ಬಂದಿದ್ದ ಇಬ್ಬರು ಕೃತ್ಯ ಎಸಗಿರುವುದಾಗಿ ಮಾಹಿತಿ ಲಭಿಸಿದೆ. ಫ್ಲೆಕ್ಸ್ ಗಳನ್ನ ಸ್ಥಳೀಯ ನಗರಾಡಳಿತದಿಂದ ಅನುಮತಿ ಪಡೆಯದೆ ಅಳವಡಿಸಿರುವುದರಿಂದ ಈವರೆಗೂ ಯಾರೂ ಠಾಣೆಗೆ ದೂರು ನೀಡಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ.

Also Read  ಬೈಂದೂರು : ಕಾರಿನೊಳಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಚಾಲಕ

 

error: Content is protected !!
Scroll to Top