ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಜೂ. 30ರ ವರೆಗೆ ವಿಸ್ತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 17. 2023-24ರ ಸಾಲಿನ ಸರಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಯನ್ನು ಜೂ. 30ರವರೆಗೆ ವಿಸ್ತರಿಸಿ ರಾಜ್ಯ ಸರಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.

ಈ ಹಿಂದೆ ವರ್ಗಾವಣೆಯನ್ನು ಜೂ. 15ರ ವರೆಗೆ ಕೈಗೊಳ್ಳಲು ಆದೇಶಿಸಲಾಗಿತ್ತು. ಇದೀಗ ಸಾರ್ವತ್ರಿಕ ವರ್ಗಾವಣೆಯ ಅವಧಿಯನ್ನು ವಿಸ್ತರಿಸುವುದು ಅವಶ್ಯವೆಂದು ಈ ಆದೇಶವನ್ನು ಹೊರಡಿಸಿದೆ. 2023-24ನೇ ಸಾಲಿಗೆ ಗ್ರೂಪ್ ಎ, ಗ್ರೂಪ್ ಬಿ, ಗ್ರೂಪ್ ಸಿ ಮತ್ತು ಗ್ರೂಪ್ ಡಿ ವರ್ಗದ ಅಧಿಕಾರಿ, ನೌಕರರಿಗೆ ಅನ್ವಯವಾಗುವಂತೆ ವರ್ಗಾವಣೆ ಮಾರ್ಗಸೂಚಿ ಹೊರಡಿಸಲಾಗಿತ್ತು. ವರ್ಗಾವಣೆ ಕುರಿತಂತೆ ವಿಸ್ಕೃತ ಮಾರ್ಗಸೂಚಿಗಳನ್ನು ನೀಡಲಾಗಿದ್ದು, ಇದರ ಪ್ರಕಾರ ಸರಕಾರಿ ನೌಕರರ ವರ್ಗಾವಣೆಯನ್ನು ಮೇ ಮತ್ತು ಜೂನ್ ತಿಂಗಳಲ್ಲಿ ಷರತ್ತಿಗೆ ಒಳಪಟ್ಟು ಮಾಡಬಹುದಾಗಿದೆ.

Also Read  ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

error: Content is protected !!
Scroll to Top