ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದ ಸರಕಾರಕ್ಕೆ ಬಾರತೀಯ ಕ್ರೈಸ್ತ ಒಕ್ಕೂಟದಿಂದ ಅಭಿನಂದನೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕಳೆದ ಬಿಜೆಪಿ ಸರಕಾರ ಮಾಡಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ಹಿಂತೆಗೆದಿದ್ದನ್ನು ಭಾರತೀಯ ಕ್ರೈಸ್ತ ಒಕ್ಕೂಟ ಸ್ವಾಗತಿಸುತ್ತದೆ ಇದಕ್ಕಾಗಿ ರಾಜ್ಯ ಸರಕಾರ ಮತ್ತು ಮುಖ್ಯಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಒಕ್ಕೂಟದ ಅಧ್ಯಕ್ಷರಾದ ಪ್ರಶಾಂತ್ ಜತ್ತನ್ನ ಹೇಳಿದ್ದಾರೆ.

ಈ ಜನ ವಿರೋಧಿ ಕಾಯ್ದೆಯನ್ನು ಬಿಜೆಪಿ ಸರಕಾರ ಜಾರಿಗೆ ತರಲು ಮುಂದಾದಾಗ ಈ ಕಾಯ್ದೆ ವಿರುದ್ಧ ಅಧಿವೇಶನ ನಡೆಯುವ ಸಂದರ್ಭ ಬೆಳಗಾವಿಯ ವಿಧಾನಸೌಧದ ಎದುರು ಭಾರತೀಯ ಕ್ರೈಸ್ತ ಒಕ್ಕೂಟ ಈ ಕಾಯ್ದೆ ವಿರುದ್ಧ ಒಂದು ದಿನದ ಉಪವಾಸ ಸತ್ಯಗ್ರಹ ನಡೆಸಿತ್ತು. ಅಂದು ನಮ್ಮ ಮನವಿಯನ್ನು ಸ್ವೀಕಾರಕ್ಕೆ ಸರಕಾರದ ಪ್ರತಿನಿಧಿಯಾಗಿ ಬಂದಿದ್ದ ಅಂದಿನ ಕಾರ್ಮಿಕ ಸಚಿವರಾದ ಶಿವರಾಮ್ ಹೆಬ್ಬಾರ್, ನಿಮ್ಮ ಮನವಿಯನ್ನು ಪರಿಶೀಲಿಸುತ್ತೇವೆ ಎಂದು ಹೇಳಿದರಾದರೂ ಏನನ್ನೂ ಮಾಡದೆ ಈ ಕಾನೂನನ್ನು ಮಾಡಲೇಬೇಕೆಂದು ಹಠ ಹಿಡಿದು ಈ ಕಾನೂನನ್ನು ಜಾರಿಗೆ ತಂದರು. ಇದೇ ಸಂದರ್ಭದಲ್ಲಿ ಅಂದಿನ ವಿರೋಧ ಪಕ್ಷದ ನಾಯಕರಾದ ಸಿದ್ಧರಾಮಯ್ಯನವರು ನಮ್ಮ ಉಪವಾಸ ಸತ್ಯಾಗ್ರಹ ಪ್ರತಿಭಟನಾ ಸ್ಥಳಕ್ಕಾಗಮಿಸಿ ನಮ್ಮ ಅಹವಾಲನ್ನು ಸ್ವೀಕರಿಸಿ ಮುಂದಿನ ಚುನಾವಣೆಯಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ರದ್ದುಪಡಿಸುತ್ತೇವೆ ಎಂದು ಭರವಸೆ ನೀಡಿದ್ದರು. ನುಡಿದಂತೆ ನಡೆದು ತಮ್ಮ ಸರಕಾರ ಬಂದ ಕೂಡಲೇ ಈ ದ್ವೇಷದ ಕಾನೂನನ್ನು ರದ್ದು ಪಡಿಸಿದ ನಮ್ಮ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಇವರಿಗೆ ಕ್ರೈಸ್ತ ಬಾಂಧವರ ಪರವಾಗಿ ಮತ್ತು ನಾಡಿನ ಸಮಸ್ತ ಜನತೆಯ ಪರವಾಗಿ ಭಾರತೀಯ ಕ್ರೈಸ್ತ ಒಕ್ಕೂಟವು ಅಭಿನಂದನೆಯನ್ನು ಸಲ್ಲಿಸುತ್ತೇವೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!

Join the Group

Join WhatsApp Group