(ನ್ಯೂಸ್ ಕಡಬ)newskadaba ಲಕ್ನೋ, ಜೂ .19 . ಉತ್ತರ ಭಾರತ ಬಿಸಿಲಿನ ತಾಪ ಏರುತ್ತಿದ್ದು ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಕೇವಲ 72 ಗಂಟೆಗಳ ಅವಧಿಯಲ್ಲಿ 98 ಮಂದಿ ಮೃತಪಟ್ಟ ಘಟನೆ ನಡೆದಿದೆ.
ತಾಪಮಾನ 44 ಡಿಗ್ರಿ ಸೆಲ್ಸಿಯಸ್ ಗಿಂತ ಹೆಚ್ಚಾದ ಕಾರಣ ನಾಲ್ಕು ದಿನಗಳಲ್ಲಿ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕನಿಷ್ಠ 57 ಜನರು ಮೃತಪಟ್ಟಿದ್ದಾರೆ.ಇನ್ನೂ 400ಕ್ಕೂ ಹೆಚ್ಚು ಮಂದಿ ಆಸ್ಪತ್ರೆಯಲ್ಲೇ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.