(ನ್ಯೂಸ್ ಕಡಬ)newskadaba ಕಾರ್ಕಳ, ಜೂ . 19 . ಬಸ್ ಮತ್ತು ಬೈಕ್ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿ ದಾರುಣವಾಗಿ ಮೃತಪಟ್ಟಿರುವ ಘಟನೆ ಹೆಬ್ರಿ ಆಗುಂಬೆ ಘಾಟಿ ತಿರುವಿನಲ್ಲಿ ನಡೆದಿದೆ.
ಘಟನೆಯಲ್ಲಿ ಬಾರ್ಕೂರು ನಿವಾಸಿ ಸಶಾಂಕ್ ಎಂಬಾತ ಸ್ಥಳದಲ್ಲಿ ಮೃತಪಟ್ಟರೆ, ಗಂಭೀರ ಗಾಯ ಗೊಂಡಿದ್ದ ಸಹಸವಾರೆ ನಿರ್ಮಿತ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಸಿವಿಲ್ ಎಂಜಿನಿಯರಿಂಗ್ ಮುಗಿಸಿ ಕಂಟ್ರಾಕ್ಟರ್ ಜತೆಗೆ ಕೆಲಸ ಮಾಡುತ್ತಿದ್ದ. ಶಶಾಂಕ್ ಮತ್ತು ನಿರ್ಮಿತಾ ಬೈಕಿನಲ್ಲಿ ತೀರ್ಥಹಳ್ಳಿ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿರುವ ವೇಳೆ ಮಂಗಳೂರಿನಿಂದ ಉಡುಪಿ ಮಾರ್ಗವಾಗಿ ಶಿವಮೊಗ್ಗಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.ಈ ಕುರಿತುಹೆಬ್ರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣೆ ದಾಖಲಾಗಿದೆ.