(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 19. ಬೆಂಗಳೂರು -ಧಾರವಾಡ ರೈಲು ನಿಲ್ದಾಣಗಳ ನಡುವೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಸೋಮವಾರದಂದು ಮುಂಜಾನೆ ಆರಂಭವಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ವೀಡಿಯೊ ಕಾನ್ಫರೆನ್ಸ್ ಮೂಲಕ ಜೂನ್ 26ರಂದು ರೈಲು ಸಂಚಾರಕ್ಕೆ ಚಾಲನೆ ನೀಡಿದ ಬಳಿಕ ಅಧಿಕೃತವಾಗಿ ಓಡಾಟ ಆರಂಭಿಸಲಿದೆ. ರೈಲು ಇಂದು ಬೆಳಗ್ಗೆ 5:45 ಕ್ಕೆ ಬೆಂಗಳೂರಿನಿಂದ ಹೊರಟಿದ್ದು,12.40ಕ್ಕೆ ಧಾರಾವಾಡಕ್ಕೆ ತಲುಪಲಿದೆ. ಮಧ್ಯಾಹ್ನ 1.15 ಕ್ಕೆ ಧಾರಾವಾಡದಿಂದ ಹೊರಟು ರಾತ್ರಿ 8.10ಕ್ಕೆ ಬೆಂಗಳೂರಿನ ಕಾಂತ್ರಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ತಲುಪಲಿದೆ.
Also Read ಕಡಬ: ಅಕ್ಷರದಾಸೋಹ ಸಿಬ್ಬಂದಿಗಳಿಗೆ ಪ್ರೋತ್ಸಾಹ ಧನ ನೀಡುವಂತೆ ಎಸ್ಡಿಪಿಐ ವತಿಯಿಂದ ಮುಖ್ಯಮಂತ್ರಿಗಳಿಗೆ ಮನವಿ