ಬೆಳ್ಳಾರೆ: ಅಕ್ರಮ ಗೋಸಾಗಾಟ ➤ ಇಬ್ಬರು ಅರೆಸ್ಟ್, ಇಬ್ಬರು ಪರಾರಿ

(ನ್ಯೂಸ್ ಕಡಬ) newskadab.com ಬೆಳ್ಳಾರೆ, ಜೂ.19. ಅಕ್ರಮ ಗೋಸಾಗಾಟ ನಡೆಸುತ್ತಿದ್ದ ವೇಳೆ ವಾಹನವನ್ನು ತಡೆದ ಬೆಳ್ಳಾರೆ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಇಬ್ಬರು ಪರಾರಿಯಾಗಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಘಟನೆಗೆ ಸಂಬಂಧಿಸಿದಂತೆ ಮೂರು ಗಂಡು ಕರುಗಳು, ಆಕ್ಟಿವಾ ಸ್ಕೂಟರ್ ಹಾಗೂ ಪಿಕಪ್ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಭಾನುವಾರ ತಡರಾತ್ರಿ ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದ ಮೂವಪ್ಪೆ ಎಂಬಲ್ಲಿ ಬೆಳ್ಳಾರೆ ಪೊಲೀಸ್ ಠಾಣಾ ಪಿಎಸ್ಐ ಸುಹಾಸ್ ಆರ್. ಹಾಗೂ ಸಿಬ್ಬಂದಿಗಳು ಕರ್ತವ್ಯ ದಲ್ಲಿದ್ದ ವೇಳೆ ಪಿಕಪ್ ವಾಹನದಲ್ಲಿ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದುದನ್ನು ಕಂಡು ತಡೆಹಿಡಿದಿದ್ದು,
3 ಗಂಡು ಕರುಗಳು ಹಾಗೂ ಅಕ್ರಮ ಸಾಗಾಟಕ್ಕೆ ಬಳಿಸಿದ ಹೊಂಡಾ ಆಕ್ಟಿವಾ ಸ್ಕೂಟರ್ ವಾಹನ, ಪಿಕಪ್ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇಬ್ಬರು ಆರೋಪಿಗಳಾದ ಇಸುಬು, ಹುಸೈನ್ ಎಂಬವರನ್ನು ಬಂಧಿಸಿದ್ದು, ಮತ್ತಿಬ್ಬರು ಆರೋಪಿಗಳಾದ ಕೃಷ್ಣಪ್ಪ ಮತ್ತು ಆಲಿ ಕೋನಡ್ಕ ಪರಾರಿಯಾಗಿದ್ದು, ಅವರ ವಿರುದ್ದ ಕೇಸು ದಾಖಲಿಸಿಕೊಂಡಿದ್ದಾರೆ. ವಿಚಾರಣೆ ಬಳಿಕ ಇಸುಬು ಮನೆಯಲ್ಲಿದ್ದ ನಾಲ್ಕು ಅಕ್ರಮ ಜಾನುವಾರುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಕಾರ್ಯಾಚರಣೆಯಲ್ಲಿ ಬೆಳ್ಳಾರೆ ಪಿಎಸ್ಐ ಸುಹಾಸ್ ಹಾಗೂ ಸಿಬ್ಬಂದಿಗಳಾದ ಶ್ರೀಶೈಲ, ಮಂಜುನಾಥ್, ಸುಭಾಷ್ ಕಿತ್ತೂರ್, ಬಸವರಾಜ್ ಭಾಗವಹಿಸಿದ್ದರು.

error: Content is protected !!

Join the Group

Join WhatsApp Group