2 ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಜೂ. 19. ಎರಡು ಖಾಸಗಿ ಬಸ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟು, ಕನಿಷ್ಠ 30 ಮಂದಿ ಗಾಯಗೊಂಡ ಘಟನೆ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಅಪಘಾತ ಸಂಭವಿಸಿದ ತಕ್ಷಣ ಸಾರ್ವಜನಿಕರು ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಳುಗಳನ್ನು ಆಸ್ಪತ್ರೆಗೆ ಸಾಗಿಸಲು ಸಹಕರಿಸಿದ್ದಾರೆ. ಘಟನೆಗೆ ನಿಖರ ಕಾರಣ ತನಿಖೆಯ ಬಳಿಕವಷ್ಟೇ ತಿಳಿದುಬರಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ

error: Content is protected !!
Scroll to Top